• Feb 14, 2026
  • NPN Log
    ಕೇಂದ್ರ ಗೃಹ ಸಚಿವಾಲಯವು ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆ 'ಜನಗಣಮನ'ದಂತೆ 'ವಂದೇ ಮಾತರಂ' ಗೀತೆಯ ಆರು ಚರಣಗಳನ್ನು ಕಡ್ಡಾಯಗೊಳಿಸಿದೆ. ಈ ಆದೇಶದ ಪ್ರಕಾರ, ಗೀತೆ ನುಡಿಸಿದಾಗ ಅಥವಾ ಹಾಡಿದಾಗ ಎಲ್ಲರೂ ಎದ್ದು ನಿಲ್ಲಬೇಕು. ಇದು ತ್ರಿವರ್ಣ ಧ್ವಜಾರೋಹಣ, ರಾಷ್ಟ್ರಪತಿಗಳ ಭಾಷಣದಂತಹ ಸಂದರ್ಭಗಳಲ್ಲಿ ಅನ್ವಯಿಸುತ್ತದೆ. ವಂದೇ ಮಾತರಂಗೆ ಅಧಿಕೃತ ಶಿಷ್ಟಾಚಾರ ಕಲ್ಪಿಸಿದ್ದು, ಶಾಲೆಗಳಲ್ಲಿಯೂ ಹಾಡಲು ಸಲಹೆ ನೀಡಲಾಗಿದೆ. ನವದೆಹಲಿ, ಫೆಬ್ರವರಿ 11: ರಾಷ್ಟ್ರಗೀತೆ ‘ಜನಗಣಮನ’ದಂತೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ (Vande Mataram)ಗೀತೆಯನ್ನು ಹಾಡುವುದು ಕೂಡ ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಆದೇಶದಲ್ಲಿ, ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ 6 ಚರಣಗಳನ್ನು ಹಾಡಬೇಕು ಎಂದು ಹೇಳಲಾಗಿದೆ. ಹಾಗೆಯೇ ಗೀತೆಯನ್ನು ನುಡಿಸಿದರೆ ಅಥವಾ ಹಾಡಿದರೆ ಎಲ್ಲರೂ ಕಡ್ಡಾಯವಾಗಿ ಎದ್ದು ನಿಲ್ಲಬೇಕು ಎಂದು ತಿಳಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯವು ತನ್ನ ನಿರ್ದೇಶನದಲ್ಲಿ ಆರು ಚರಣಗಳನ್ನು ವಂದೇ ಮಾತರಂ’ ಗೀತೆಯ 3.10 ನಿಮಿಷಗಳ ಗೀತೆಯನ್ನು ನುಡಿಸಬೇಕು ಅಥವಾ ಹಾಡಬೇಕು ಎಂದು ಹೇಳಿದೆ. ಇದರಲ್ಲಿ ತ್ರಿವರ್ಣ ಧ್ವಜ ಹಾರಿಸುವಾಗ, ಸರ್ಕಾರಿ ಕಾರ್ಯಕ್ರಮಗಳಿಗೆ ರಾಷ್ಟ್ರಪತಿಗಳ ಆಗಮನದ ಸಮಯದಲ್ಲಿ, ಅವರ ಭಾಷಣಗಳು ಮತ್ತು ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುವ ಮೊದಲು ಮತ್ತು ನಂತರ, ಹಾಗೆಯೇ ರಾಜ್ಯಪಾಲರ ಆಗಮನ ಮತ್ತು ಭಾಷಣಗಳ ಮೊದಲು ಮತ್ತು ನಂತರವೂ ಸೇರಿದೆ. ಯಾವುದೇ ಸಾಕ್ಷ್ಯಚಿತ್ರಗಳ ಪ್ರದರ್ಶನಗಳ ಮಧ್ಯೆ ಗೀತೆ ಹಾಡಿದರೆ ಎದ್ದುನಿಲ್ಲುವ ಅಗತ್ಯವಿಲ್ಲ. 6 ಚರಣಗಳಿರುವ ‘ವಂದೇ ಮಾತರಂ’ ಗೀತೆಯನ್ನು ಹಾಡುವುದು ಕಡ್ಡಾಯ ಈ ನಿರ್ದೇಶನವನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು, ಸಚಿವಾಲಯಗಳು ಮತ್ತು ಸಾಂವಿಧಾನಿಕ ಸಂಸ್ಥೆಗಳಿಗೆ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ನೀಡಲಾಗಿದೆ. ಇಲ್ಲಿಯವರೆಗೆ, ವಂದೇ ಮಾತರಂ ಹಾಡಲು ಯಾವುದೇ ಅಧಿಕೃತ ಶಿಷ್ಟಾಚಾರವಿರಲಿಲ್ಲ. ಆದರೆ ಜನ ಗಣ ಮನ ಗೀತೆಯು ರಾಗ, ಸಮಯ ಮತ್ತು ಗಾಯನದ ಬಗ್ಗೆ ಸ್ಪಷ್ಟ ನಿಯಮಗಳನ್ನು ಹೊಂದಿತ್ತು. ಹಾಡಿನ ವಿಸ್ತೃತ, ಆರು-ಚರಣಗಳ ಆವೃತ್ತಿಯನ್ನು ಇಲ್ಲಿಯವರೆಗೆ ಅಧಿಕೃತ ಕಾರ್ಯಕ್ರಮಗಳಲ್ಲಿ ಹಾಡಿರಲಿಲ್ಲ, ಆದರೆ ಈಗ ಅದನ್ನು ಕಡ್ಡಾಯಗೊಳಿಸಲಾಗಿದೆ. ಯಾವಾಗ ವಂದೇ ಮಾತರಂ ಹಾಡಬೇಕು? ನಾಗರಿಕ ಪುರಸ್ಕಾರ ಸಮಾರಂಭಗಳು, ಸರ್ಕಾರ ಆಯೋಜಿಸುವ ರಾಜ್ಯ ಕಾರ್ಯಕ್ರಮಗಳು ಮತ್ತು ಇತರ ಕಾರ್ಯಕ್ರಮಗಳಲ್ಲಿ ರಾಷ್ಟ್ರಪತಿಗಳ ಆಗಮನ ಮತ್ತು ನಿರ್ಗಮನ, ಅಖಿಲ ಭಾರತ ರೇಡಿಯೋ ಮತ್ತು ದೂರದರ್ಶನದಲ್ಲಿ ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣದ ಮೊದಲು ಮತ್ತು ನಂತರ, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದೊಳಗಿನ ಔಪಚಾರಿಕ ರಾಜ್ಯ ಕಾರ್ಯಕ್ರಮಗಳಲ್ಲಿ ರಾಜ್ಯಪಾಲರು-ಲೆಫ್ಟಿನೆಂಟ್ ಗವರ್ನರ್ ಅವರ ಆಗಮನ ಮತ್ತು ನಿರ್ಗಮನ, ಮೆರವಣಿಗೆಯಲ್ಲಿ ರಾಷ್ಟ್ರಧ್ವಜವನ್ನು ಹೊರತರುವ ಸಮಯ ಮತ್ತು ಭಾರತ ಸರ್ಕಾರವು ವಿಶೇಷ ಆದೇಶಗಳನ್ನು ಹೊರಡಿಸಬಹುದಾದ ಯಾವುದೇ ಇತರ ಸಂದರ್ಭಗಳಲ್ಲಿ ಸೇರಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ವಂದೇ ಮಾತರಂ ಹಾಡುವ ಮೊದಲು ಡ್ರಮ್ ರೋಲ್ ರಾಷ್ಟ್ರಗೀತೆ ನುಡಿಸಲಾಗುವುದು ಎಂದು ಪ್ರೇಕ್ಷಕರಿಗೆ ಸೂಚಿಸಲು ಡ್ರಮ್ ರೋಲ್ ಅದರ ಮೊದಲು ಇರುತ್ತದೆ. ರೋಲ್ ನಿಧಾನಗತಿಯಲ್ಲಿ ಪ್ರಾರಂಭವಾಗುತ್ತದೆ, ನಂತರ ಗರಿಷ್ಠ ಸಂಭವನೀಯ ಧ್ವನಿ ಮಟ್ಟವನ್ನು ತಲುಪುತ್ತದೆ, ಮತ್ತು ನಂತರ ಕ್ರಮೇಣ ಅದರ ಮೂಲ ಕಡಿಮೆ ಪಿಚ್‌ಗೆ ಮರಳುತ್ತದೆ, ಆದರೆ 7 ನೇ ಬೀಟ್‌ನವರೆಗೆ ಕೇಳಿಸುತ್ತದೆ. ನಂತರ ರಾಷ್ಟ್ರಗೀತೆ ಪ್ರಾರಂಭವಾಗುವ ಮೊದಲು ಒಂದು ಬೀಟ್‌ನ ವಿರಾಮ ಇರುತ್ತದೆ. ಶಾಲೆಗಳಲ್ಲಿಯೂ ‘ವಂದೇ ಮಾತರಂ’ ಹಾಡಲು ಸಲಹೆ ಎಲ್ಲಾ ಶಾಲೆಗಳು ತಮ್ಮ ದಿನವನ್ನು ಸಾಮೂಹಿಕವಾಗಿ ರಾಷ್ಟ್ರಗೀತೆ ಹಾಡುವುದರೊಂದಿಗೆ ಪ್ರಾರಂಭಿಸಲಾಗುತ್ತದೆ ಇನ್ನುಮುಂದೆ ಅದರ ಜತೆ ವಂದೇ ಮಾತರಂ ಕೂಡ ಹಾಡಬಹುದು. ಈ ವರ್ಷ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ನ 150 ನೇ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ. ಬಂಕಿಮ್ ಚಂದ್ರ 1875 ರಲ್ಲಿ ದೇಶಭಕ್ತಿ ಗೀತೆ ‘ವಂದೇ ಮಾತರಂ’ ರಚನೆ ಈ ಸಂಯೋಜನೆಯ ಹಿಂದೆ ಒಂದು ಕುತೂಹಲಕಾರಿ ಕಥೆ ಇದೆ. ವರದಿಗಳ ಪ್ರಕಾರ, ಬ್ರಿಟಿಷ್ ಆಡಳಿತಗಾರರು ಪ್ರತಿ ಸಮಾರಂಭದಲ್ಲಿ ಇಂಗ್ಲೆಂಡ್ ರಾಣಿಗೆ ಗೌರವ ಸಲ್ಲಿಸುವ ‘ಸೇವ್​ ದಿ ಕ್ವೀನ್’ ಎಂಬ ಹಾಡನ್ನು ಹಾಡುವುದನ್ನು ಕಡ್ಡಾಯಗೊಳಿಸಿದ್ದರು. ಇದು ಬಂಕಿಮ್ ಚಂದ್ರ ಸೇರಿದಂತೆ ಅನೇಕ ದೇಶವಾಸಿಗಳನ್ನು ಕೆರಳಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಅವರು 1874 ರಲ್ಲಿ ವಂದೇ ಮಾತರಂ ಎಂಬ ಹಾಡನ್ನು ರಚಿಸಿದರು. ಈ ಹಾಡಿನ ಕೇಂದ್ರ ವಿಷಯವೆಂದರೆ ಭಾರತದ ಭೂಮಿಯನ್ನು ತಾಯಿ ಎಂದು ಸಂಬೋಧಿಸುವುದು. ಈ ಹಾಡನ್ನು ನಂತರ ಅವರ 1882 ರ ಕಾದಂಬರಿ ‘ಆನಂದಮಠ’ದಲ್ಲಿ ಸೇರಿಸಲಾಯಿತು. ಐತಿಹಾಸಿಕ ಮತ್ತು ಸಾಮಾಜಿಕ ರಚನೆಗಳಿಂದ ಹೆಣೆಯಲಾದ ಈ ಕಾದಂಬರಿಯು ದೇಶದಲ್ಲಿ ರಾಷ್ಟ್ರೀಯತೆಯ ಚೈತನ್ಯವನ್ನು ಜಾಗೃತಗೊಳಿಸಲು ಗಮನಾರ್ಹವಾಗಿ ಕೊಡುಗೆ ನೀಡಿತು. ವಂದೇ ಮಾತರಂ ಅನ್ನು ಮೊದಲ ಬಾರಿಗೆ ಹಾಡಿದ್ದು 1896 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದಲ್ಲಿ ಮೊದಲ ಬಾರಿಗೆ ಈ ಹಾಡನ್ನು ಹಾಡಲಾಯಿತು. ಅಲ್ಪಾವಧಿಯಲ್ಲಿಯೇ, ದೇಶಭಕ್ತಿಯ ಸಂಕೇತವಾದ ಈ ಹಾಡು ಬ್ರಿಟಿಷ್ ಆಳ್ವಿಕೆಯ ವಿರುದ್ಧ ಭಾರತೀಯ ಕ್ರಾಂತಿಕಾರಿಗಳ ನೆಚ್ಚಿನ ಹಾಡು ಮತ್ತು ಮುಖ್ಯ ಘೋಷಣೆಯಾಯಿತು. ದೇಶಾದ್ಯಂತ, ಕ್ರಾಂತಿಕಾರಿ ಮಕ್ಕಳು, ಯುವಕರು, ವಯಸ್ಕರು ಮಾತ್ರವಲ್ಲದೆ, ಭಾರತೀಯ ಮಹಿಳೆಯರು ಸಹ ಸ್ವಾತಂತ್ರ್ಯ ಹೋರಾಟದ ಅದೇ ಘೋಷಣೆಯನ್ನು ಪ್ರತಿಧ್ವನಿಸಿದರು.

    You Might Also Like

    Comments

    Leave A Comment

    Don’t worry ! Your email address will not be published. Required fields are marked (*).

    Get Newsletter

    Featured News

    Advertisement

    Voting Poll (Checkbox)

    Voting Poll (Radio)

    Readers Opinion