• Feb 14, 2026
  • NPN Log
    Mandya Ramesh-Sadhu Kokila: ಕನ್ನಡ ಚಿತ್ರರಂಗದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಚಲನಚಿತ್ರ ಅಕಾಡೆಮಿ ಅಧ್ಯಕ್ಷರೂ ಆಗಿರುವ ಸಾಧು ಕೋಕಿಲಾ ಮತ್ತು ನಟ ಮಂಡ್ಯ ರಮೇಶ್ ವಿರುದ್ಧ ಮಾಡಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರೂ ನಟರಿಗೆ ಹೈಕೋರ್ಟ್​ ಬಿಗ್ ರಿಲೀಫ್ ನೀಡಿದೆ. 2017 ರಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ರದ್ದು ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಕನ್ನಡ ಚಿತ್ರರಂಗದ (Sandalwood) ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಚಲನಚಿತ್ರ ಅಕಾಡೆಮಿ ಅಧ್ಯಕ್ಷರೂ ಆಗಿರುವ ಸಾಧು ಕೋಕಿಲಾ ಮತ್ತು ನಟ ಮಂಡ್ಯ ರಮೇಶ್ ವಿರುದ್ಧ ಮಾಡಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರೂ ನಟರಿಗೆ ಹೈಕೋರ್ಟ್​ ಬಿಗ್ ರಿಲೀಫ್ ನೀಡಿದೆ. 2017 ರಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ರದ್ದು ಮಾಡಿ ಹೈಕೋರ್ಟ್ ಆದೇಶ ನೀಡಿದೆ. 2017 ರಲ್ಲಿ ಸಾಧು ಕೋಕಿಲ ಮತ್ತು ನಟ ಮಂಡ್ಯ ರಮೇಶ್ ಅವರು ಮೈಸೂರಿನ ಪಾರ್ಲರ್ ಒಂದರಲ್ಲಿ ಮಸಾಜ್ ಮಾಡಿಸಿಕೊಂಡ ಬಳಿಕ, ಅಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಇಬ್ಬರು ನಟರು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ನಟರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆಗ ಇಬ್ಬರು ನಟರಿಗೆ ಸಮನ್ಸ್ ಜಾರಿ ಮಾಡಲಾಗಿತ್ತು, ಬಳಿಕ 2019 ರಲ್ಲಿ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿತ್ತು. ಎಫ್‌ಐಆರ್‌ನಲ್ಲಿ ಹೆಸರಿಲ್ಲ, ಹಾಗೂ ಆರೋಪಕ್ಕೆ ಸಾಕ್ಷ್ಯಗಳಿಲ್ಲವೆಂದು ಮಂಡ್ಯ ರಮೇಶ್ ಮತ್ತು ಸಾಧು ಕೋಕಿಲ ಪರವಾಗಿ ಹಿರಿಯ ವಕೀಲ ಹೆಚ್.ಎಸ್.ಚಂದ್ರಮೌಳಿ ವಾದ ಮಂಡಿಸಿದ್ದರು. ಅದರಂತೆ ಸೂಕ್ತ ಸಾಕ್ಷಾಧಾರಗಳ ಕೊರತೆಯ ಕಾರಣಕ್ಕೆ ಪ್ರಕರಣವನ್ನು ರದ್ದು ಮಾಡಲಾಗಿದೆ. ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶವನ್ನು ಹೊರಡಿಸಿದೆ.

    You Might Also Like

    Comments

    Leave A Comment

    Don’t worry ! Your email address will not be published. Required fields are marked (*).

    Get Newsletter

    Featured News

    Advertisement

    Voting Poll (Checkbox)

    Voting Poll (Radio)

    Readers Opinion